ಇಂದರಗಿ ಸರ್ಕಾರಿ ಶಾಲೆಗೆ ಬಿಇಒ ಶೇಖರಪ್ಪ ಹೊರಪೇಟೆ ಅನಿರೀಕ್ಷಿತ ಭೇಟಿ
ಗಂಗಾವತಿ, ಆ.13: ಕೊಪ್ಪಳ ಜಿಲ್ಲೆಯ ಗಂಗಾವತಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಇಂದರಗಿ ಸರ್ಕಾರಿ ಮಾದರಿಯ ಹಿರಿಯ ಪ್ರಾಥಮಿಕ ಶಾಲೆಗೆ ಕೊಪ್ಪಳ ತಾಲೂಕ ಕ್ಷೇತ್ರ ಶಿಕ್ಷಣಾಧಿಕಾರಿ ಶೇಖರಪ್ಪ ಹೊರಪೇಟೆ ಅವರು ಅನಿರೀಕ್ಷಿತವಾಗಿ ಭೇಟಿ ನೀಡಿ, ಶಾಲೆಯ ಶೈಕ್ಷಣಿಕ ಹಾಗೂ ಆಡಳಿತಾತ್ಮಕ ಚಟುವಟಿಕೆಗಳನ್ನು ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಶಾಲೆಯ ತರಗತಿ ಕೊಠಡಿಗಳು, ವಿದ್ಯಾರ್ಥಿಗಳ ಕಲಿಕಾ ಪ್ರಗತಿ, ಶಿಕ್ಷಕರ ಬೋಧನಾ ಕಾರ್ಯ ಹಾಗೂ ಶಾಲೆಯ ಮೂಲಸೌಕರ್ಯಗಳ ಕುರಿತು ಮಾಹಿತಿ ಪಡೆದುಕೊಂಡರು. ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ಅವರು, ಉತ್ತಮ ಶಿಕ್ಷಣದ ಜೊತೆಗೆ ಶಿಸ್ತು, ಸ್ವಚ್ಛತೆ ಹಾಗೂ ಸೃಜನಶೀಲ ಚಟುವಟಿಕೆಗಳಿಗೆ ಹೆಚ್ಚಿನ ಆದ್ಯತೆ ನೀಡುವಂತೆ ಶಿಕ್ಷಕರಿಗೆ ಸಲಹೆ ನೀಡಿದರು.
ನಂತರ ಕ್ಷೇತ್ರ ಶಿಕ್ಷಣಾಧಿಕಾರಿ ಶೇಖರಪ್ಪ ಹೊರಪೇಟೆ ಅವರು ಶಾಲಾ ಮಕ್ಕಳೊಂದಿಗೆ ಕುಳಿತು ಮಧ್ಯಾಹ್ನದ ಬಿಸಿಯೂಟ ಸವಿದರು. ಮಕ್ಕಳೊಂದಿಗೆ ಆತ್ಮೀಯವಾಗಿ ಬೆರೆತು ಊಟ ಮಾಡುವ ಮೂಲಕ ವಿದ್ಯಾರ್ಥಿಗಳೊಂದಿಗೆ ಸರಳವಾಗಿ ಸಂವಾದ ನಡೆಸಿದರು. ಶಾಲೆಯಲ್ಲಿ ಮಕ್ಕಳಿಗೆ ನೀಡಲಾಗುತ್ತಿರುವ ಮಧ್ಯಾಹ್ನದ ಬಿಸಿಯೂಟದ ಗುಣಮಟ್ಟ ಹಾಗೂ ವ್ಯವಸ್ಥೆಯನ್ನೂ ಈ ಸಂದರ್ಭದಲ್ಲಿ ಗಮನಿಸಿದರು.
ನಂತರ ಎಸ್‌ಡಿಎಂಸಿ ಅಧ್ಯಕ್ಷ ಅಮರೇಶ ಕುಂಬಾರ ಮಾತನಾಡಿ, “ಸರ್ಕಾರಿ ಶಾಲೆಗಳ ಶೈಕ್ಷಣಿಕ ಗುಣಮಟ್ಟವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ಶಾಲೆಗಳಿಗೆ ಭೇಟಿ ನೀಡಿ ಶಿಕ್ಷಕರು ಹಾಗೂ ಎಸ್‌ಡಿಎಂಸಿ ಸದಸ್ಯರೊಂದಿಗೆ ನೇರವಾಗಿ ಚರ್ಚಿಸುವುದು ಪ್ರೋತ್ಸಾಹದಾಯಕವಾಗಿದೆ. ಇಂದರಗಿ ಶಾಲೆಯ ಅಭಿವೃದ್ಧಿಗೆ ಶಿಕ್ಷಕರು, ಎಸ್‌ಡಿಎಂಸಿ ಹಾಗೂ ಗ್ರಾಮಸ್ಥರು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸುತ್ತಿದ್ದು, ವಿದ್ಯಾರ್ಥಿಗಳಿಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸಲು ಎಲ್ಲ ರೀತಿಯ ಸಹಕಾರ ನೀಡಲಾಗುವುದು” ಎಂದರು.
ಈ ಸಂದರ್ಭದಲ್ಲಿ ಎಸ್‌ಡಿಎಂಸಿ ಉಪಾಧ್ಯಕ್ಷರು, ಹಿರಿಯ ಮುಖ್ಯೋಪಾಧ್ಯಾಯರು, ಶಿಕ್ಷಕರು ಹಾಗೂ ಸರ್ವ ಸದಸ್ಯರು ಉಪಸ್ಥಿತರಿದ್ದರು.
ನಿಮ್ಮ ಪ್ರತಿಕ್ರಿಯೆ ಏನು?
ಇಷ್ಟ
0
ಇಷ್ಟವಿಲ್ಲ
0
ಪ್ರೀತಿ
0
ತಮಾಷೆ
0
ವಾಹ್
0
ದುಃಖ
0
ಕೋಪಗೊಂಡ
0
ಕಾಮೆಂಟ್‌ಗಳು (0)