ಕರ್ನಾಟಕಕ್ಕೆ ಮತ್ತೆ ಶಾಕ್‌ – ತಮಿಳುನಾಡಿಗೆ ನಿತ್ಯ 12 ಸಾವಿರ ಕ್ಯೂಸೆಕ್ ನೀರು ಹರಿಸಲು CWRC ಆದೇಶ!

ಆಗಸ್ಟ್ 14, 2026 - 04:59
0 0

ಬೆಂಗಳೂರು : ಕಾವೇರಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಮಹತ್ವದ ಶಿಫಾರಸು ಮಾಡಿದ್ದು, ಮುಂದಿನ 15 ದಿನಗಳ ಕಾಲ ತಮಿಳುನಾಡಿಗೆ ನಿತ್ಯ 12,000 ಕ್ಯೂಸೆಕ್ ನೀರು ಹರಿಸುವಂತೆ ಕರ್ನಾಟಕಕ್ಕೆ ಸೂಚಿಸಿದೆ.

ಕಾವೇರಿ ನೀರು ನಿಯಂತ್ರಣ ಸಮಿತಿಯ ಈ ಆದೇಶದಿಂದ ರಾಜ್ಯದ ಕನ್ನಡಿಗರು, ರೈತಪರ ಸಂಘಟನೆಗಳು ಮತ್ತೆ ತೀವ್ರ ಆಕ್ರೋಶ ವ್ಯಕ್ತಪಡಿಸಿವೆ.

ಇದೀಗ CWRC ಆದೇಶವನ್ನು ಪ್ರಶ್ನಿಸಿ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ (CWMA) ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಈ ಕುರಿತು ಕೆಲವೇ ಕ್ಷಣಗಳಲ್ಲಿ CWMA ಉನ್ನತ ಮಟ್ಟದ ಸಭೆ ನಡೆಯಲಿದ್ದು, ಸಭೆಯಲ್ಲಿ ರಾಜ್ಯದ ಪರವಾಗಿ ಪ್ರಬಲವಾದ ವಾದ ಮಂಡಿಸಲು ಜಲಸಂಪನ್ಮೂಲ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರಿಗಳಿಗೆ ಈ ಕುರಿತು ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ.

ಸಭೆಯಲ್ಲಿ ತಮಿಳುನಾಡಿನ ಬೇಡಿಕೆಯನ್ನು ವಿರೋಧಿಸಲು ರಾಜ್ಯ ಸರ್ಕಾರ ಪ್ರಮುಖ ಕಾರಣವೊಂದನ್ನು ಮುಂದಿಡಲು ಸಜ್ಜಾಗಿದೆ. ಕೃಷಿಗಿಂತ ಹೆಚ್ಚಾಗಿ ಕುಡಿಯುವ ನೀರಿನ ಉದ್ದೇಶಕ್ಕಾಗಿ ಮೀಸಲಿಡಬೇಕಾದ ಅನಿವಾರ್ಯತೆಯನ್ನು ಪ್ರಾಧಿಕಾರದ ಮುಂದೆ ಬಲವಾಗಿ ಮಂಡಿಸಲು ನಿರ್ಧರಿಸಲಾಗಿದೆ.

The post ಕರ್ನಾಟಕಕ್ಕೆ ಮತ್ತೆ ಶಾಕ್‌ – ತಮಿಳುನಾಡಿಗೆ ನಿತ್ಯ 12 ಸಾವಿರ ಕ್ಯೂಸೆಕ್ ನೀರು ಹರಿಸಲು CWRC ಆದೇಶ! first appeared on Freedom TV.

ನಿಮ್ಮ ಪ್ರತಿಕ್ರಿಯೆ ಏನು?

ಇಷ್ಟ ಇಷ್ಟ 0
ಇಷ್ಟವಿಲ್ಲ ಇಷ್ಟವಿಲ್ಲ 0
ಪ್ರೀತಿ ಪ್ರೀತಿ 0
ತಮಾಷೆ ತಮಾಷೆ 0
ವಾಹ್ ವಾಹ್ 0
ದುಃಖ ದುಃಖ 0
ಕೋಪಗೊಂಡ ಕೋಪಗೊಂಡ 0

ಕಾಮೆಂಟ್‌ಗಳು (0)

User