ಕಾಡಾನೆ ದಾಳಿಗೆ ಕಾರ್ಮಿಕ ಸಾ**: ಕೊಡಗಿನಲ್ಲಿ ತೀವ್ರಗೊಂಡ ಪ್ರತಿಭಟನೆ

ಕೊಡಗು: ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಒಂಟಿಯಂಗಡಿಯಲ್ಲಿ ಕಾಡಾನೆ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಈ ಬಗ್ಗೆ ಕೂಡಲೇ ಕ್ರಮ ತೆಗೆದುಕೊಳ್ಳುವಂತೆ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ. ಕಾಡಾನೆ ದಾಳಿಯಿಂದ ಗ್ರಾಮದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದ್ದು, ಅರಣ್ಯ ಇಲಾಖೆ ವಿರುದ್ಧ ಜನರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಿನ್ನೆ ಕಾಡಾನೆ ದಾಳಿಯಲ್ಲಿ ಕಾರ್ಮಿಕರೊಬ್ಬರು ಮೃತಪಟ್ಟ ಘಟನೆಗೆ ಆಕ್ರೋಶಗೊಂಡ ಗ್ರಾಮಸ್ಥರು ಅಂಗಡಿ-ಮುಂಗಟ್ಟುಗಳನ್ನು ಸ್ವಯಂಪ್ರೇರಿತವಾಗಿ ಬಂದ್ ಮಾಡಿ ಪ್ರತಿಭಟನೆಗೆ ಬೆಂಬಲ ನೀಡಿದರು. ಗ್ರಾಮದಲ್ಲಿ ದಿನದಿಂದ ದಿನಕ್ಕೆ ಕಾಡಾನೆಗಳ ಉಪಟಳ ಹೆಚ್ಚುತ್ತಿದ್ದು, ಪ್ರಾಣ ಹಾನಿ ಜೊತೆಗೆ ಮನೆ, ತೋಟ, ಬೆಳೆಗಳು ನಾಶವಾಗುತ್ತಿದೆ ಎಂದು ಆರೋಪಿಸಿದರು.

ಕಾಡಾನೆ ಹಾವಳಿಗೆ ಶಾಶ್ವತ ಪರಿಹಾರ ಕಲ್ಪಿಸಬೇಕು ಹಾಗೂ ಜನರ ಸುರಕ್ಷತೆಗೆ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಸರ್ಕಾರ ಮತ್ತು ಅರಣ್ಯ ಇಲಾಖೆಯನ್ನು ಪ್ರತಿಭಟನಾಕಾರರು ಒತ್ತಾಯಿಸಿದರು. ಇದೇ ವೇಳೆ, ಸ್ಥಳಕ್ಕೆ ಜಿಲ್ಲಾ ಅರಣ್ಯಾಧಿಕಾರಿ (DFO) ಭೇಟಿ ನೀಡಿ ಗ್ರಾಮಸ್ಥರ ಸಮಸ್ಯೆ ಆಲಿಸಬೇಕು ಎಂದು ಆಗ್ರಹಿಸಿದರು. ಒಂಟಿಯಂಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಅಧಿಕಾರಿಗಳೊಂದಿಗೆ ಮಾತುಕತೆ ನಡೆಸುವವರೆಗೆ ಪ್ರತಿಭಟನೆ ಮುಂದುವರಿಸುವುದಾಗಿ ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ.

The post ಕಾಡಾನೆ ದಾಳಿಗೆ ಕಾರ್ಮಿಕ ಸಾ**: ಕೊಡಗಿನಲ್ಲಿ ತೀವ್ರಗೊಂಡ ಪ್ರತಿಭಟನೆ appeared first on Pratidhvani.
ನಿಮ್ಮ ಪ್ರತಿಕ್ರಿಯೆ ಏನು?
ಇಷ್ಟ
0
ಇಷ್ಟವಿಲ್ಲ
0
ಪ್ರೀತಿ
0
ತಮಾಷೆ
0
ವಾಹ್
0
ದುಃಖ
0
ಕೋಪಗೊಂಡ
0
ಕಾಮೆಂಟ್‌ಗಳು (0)