ಬಿಡದಿ ಟೌನ್‌ಶಿಪ್‌ ವಿರುದ್ಧ ದೋಸ್ತಿ ನಾಯಕರ ಪಾದಯಾತ್ರೆ!

ಆಗಸ್ಟ್ 11, 2026 - 02:57
0 0

ಮೈಸೂರು : ಬಿಡದಿ ಟೌನ್‌ಶಿಪ್‌ ಯೋಜನೆ ವಿರುದ್ಧ ಬಿಜೆಪಿ-ಜೆಡಿಎಸ್‌ ಮೈತ್ರಿಕೂಟದಿಂದ ಇಂದಿನಿಂದ ಮೂರು ದಿನಗಳ ಕಾಲ ಬೃಹತ್‌ ಪಾದಯಾತ್ರೆ ನಡೆಯಲಿದೆ.

‘ಬಿಡದಿ ಪಾದಯಾತ್ರೆ’ಯ ಯಶಸ್ಸಿಗಾಗಿ ಕೇಂದ್ರ ಕೃಷಿ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ನಾಡದೇವಿ ಚಾಮುಂಡೇಶ್ವರಿಯ ಮೊರೆ ಹೋಗಿದ್ದಾರೆ. ಮೈಸೂರಿನ ಪ್ರಸಿದ್ಧ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ ಅವರು, ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಹೆಚ್.ಡಿ. ಕುಮಾರಸ್ವಾಮಿಗೆ ಶಾಸಕ ಹೆಚ್.ಡಿ. ರೇವಣ್ಣ ಹಾಗೂ ಜೆಡಿಎಸ್‌ನ ಪ್ರಮುಖ ಮುಖಂಡರು ಉಪಸ್ಥಿತರಿದ್ದರು.

ಭೈರಮಂಗಲ ಗ್ರಾಮದಿಂದ ಆರಂಭವಾಗುವ ಪಾದಯಾತ್ರೆ ಮೊದಲ ದಿನ 9 ಕಿ.ಮೀ ನಡೆಯಲಿದೆ. ತಿಮ್ಮೇಗೌಡನದೊಡ್ಡಿ, ವೃಷಭಾವತಿಪುರ, ಅಬ್ಬನಕುಪ್ಪೆ, ಜೋಗರದೊಡ್ಡಿ (ಮಧ್ಯಾಹ್ನದ ಊಟ ಹಾಗೂ ವಿಶ್ರಾಂತಿ), ಮೇಡನಹಳ್ಳಿ, ಭೈರಮಂಗಲ ಕ್ರಾಸ್‌ (ರಂಗೇಗೌಡನದೊಡ್ಡಿ), ಬಿಜಿಎಸ್‌ ವೃತ್ತದ ಮೂಲಕ ಬಿಡದಿಯಲ್ಲಿ ಪಾದಯಾತ್ರೆ ಅಂತ್ಯಗೊಳ್ಳಲಿದೆ. ಬಳಿಕ ಹೋರಾಟಗಾರರು ಬಿಡದಿಯ ಮಂಜುನಾಥ ಕಲ್ಯಾಣ ಮಂಟಪದಲ್ಲಿ ವಾಸ್ತವ್ಯ ಹೂಡಲಿದ್ದಾರೆ.

ಜೆಡಿಎಸ್‌ನ ಹಾಲಿ, ಮಾಜಿ ಶಾಸಕರು, ಎಂಎಲ್ಸಿಗಳು ಸೇರಿ ಸಾವಿರಾರು ಕಾರ್ಯಕರ್ತರು ಮತ್ತು ರೈತರು ಪಾದಯಾತ್ರೆಯಲ್ಲಿ ಹೆಜ್ಜೆಹಾಕಲಿದ್ದಾರೆ. ಬಿಜೆಪಿ ವಿಪಕ್ಷ ನಾಯಕ ಆರ್.ಅಶೋಕ್, ಛಲವಾದಿ ನಾರಾಯಣಸ್ವಾಮಿ ಸೇರಿ ಬಿಜೆಪಿ ನಾಯಕರು ಕೂಡ ಭಾಗಿಯಾಗಲಿದ್ದಾರೆ. 

The post ಬಿಡದಿ ಟೌನ್‌ಶಿಪ್‌ ವಿರುದ್ಧ ದೋಸ್ತಿ ನಾಯಕರ ಪಾದಯಾತ್ರೆ! first appeared on Freedom TV.

ನಿಮ್ಮ ಪ್ರತಿಕ್ರಿಯೆ ಏನು?

ಇಷ್ಟ ಇಷ್ಟ 0
ಇಷ್ಟವಿಲ್ಲ ಇಷ್ಟವಿಲ್ಲ 0
ಪ್ರೀತಿ ಪ್ರೀತಿ 0
ತಮಾಷೆ ತಮಾಷೆ 0
ವಾಹ್ ವಾಹ್ 0
ದುಃಖ ದುಃಖ 0
ಕೋಪಗೊಂಡ ಕೋಪಗೊಂಡ 0

ಕಾಮೆಂಟ್‌ಗಳು (0)

User