ಸಂದೇಶ ಸಾರಿದ ಮುಸ್ಲಿಂ ಸಮುದಾಯ; ಮಾನವೀಯ ಸೇವೆಗೆ ಮೆಚ್ಚುಗೆ

ಆಗಸ್ಟ್ 28, 2026 - 12:19
0 1
ಸಂದೇಶ ಸಾರಿದ ಮುಸ್ಲಿಂ ಸಮುದಾಯ; ಮಾನವೀಯ ಸೇವೆಗೆ ಮೆಚ್ಚುಗೆ

* ಈದ್ ಮಿಲಾದ್: ಸರ್ಕಾರಿ ಆಸ್ಪತ್ರೆ ರೋಗಿಗಳಿಗೆ ಹಾಲು, ಹಣ್ಣು ವಿತರಣೆ
* ಮುದಗಲ್‌ನಲ್ಲಿ ಭಾವೈಕ್ಯತೆಯ ಸಂದೇಶ ಸಾರಿದ ಮುಸ್ಲಿಂ ಸಮುದಾಯ; ಮಾನವೀಯ ಸೇವೆಗೆ ಮೆಚ್ಚುಗೆ

   ಮುದಗಲ್: ಪವಿತ್ರ ಈದ್ ಮಿಲಾದ್ ಅಂಗವಾಗಿ ಮುದಗಲ್ ಪಟ್ಟಣದಲ್ಲಿ ಮುಸ್ಲಿಂ ಸಮುದಾಯದವರು ಸೌಹಾರ್ದತೆ ಹಾಗೂ ಸಂಭ್ರಮದಿಂದ ಹಬ್ಬ ಆಚರಿಸಿದರು.
ಈದ್ ಮಿಲಾದ್ ಪ್ರಯುಕ್ತ ಜುನೈದಿ ವೆಲ್ಫೇರ್ ಟ್ರಸ್ಟ್ ನೇತೃತ್ವದಲ್ಲಿ ಪಟ್ಟಣದ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆಗೆ ದಾಖಲಾಗಿದ್ದ ರೋಗಿಗಳಿಗೆ ಹಾಲು ಮತ್ತು ಹಣ್ಣುಗಳನ್ನು ವಿತರಿಸುವ ಮೂಲಕ ಮಾನವೀಯ ಸೇವೆ ಸಲ್ಲಿಸಲಾಯಿತು.ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯ ವಿಶೇಷ ಕಾರ್ಯದರ್ಶಿ ಚಂದ್ರಶೇಖರ ಎಂ. ಗಂಗಣ್ಣ ಮಾತನಾಡಿ, ಮುದಗಲ್ ಪಟ್ಟಣ ಭಾವೈಕ್ಯತೆಗೆ ಸಾಕ್ಷಿಯಾಗಿದೆ ಎಂದರು.
ಹಿಂದೂ-ಮುಸ್ಲಿಂ ಸಮುದಾಯದವರು ಮೊಹರಂ ಸೇರಿದಂತೆ ವಿವಿಧ ಹಬ್ಬಗಳನ್ನು ಒಗ್ಗಟ್ಟಿನಿಂದ ಆಚರಿಸುತ್ತಿರುವುದು ಮಾದರಿಯಾಗಿದೆ. ಪ್ರವಾದಿಯವರ ಜನ್ಮದಿನದ ಅಂಗವಾಗಿ ಆಸ್ಪತ್ರೆಯ ರೋಗಿಗಳಿಗೆ ಹಾಲು, ಹಣ್ಣು ವಿತರಿಸುವ ಮೂಲಕ ಮುಸ್ಲಿಂ ಸಮುದಾಯದವರು ಸಹೋದರತ್ವ ಮತ್ತು ಮಾನವೀಯತೆಯ ಸಂದೇಶ ಸಾರಿದ್ದಾರೆ ಎಂದು ಹೇಳಿದರು.

ಮುಖಂಡರಾದ ಗುರುಬಸಪ್ಪ ಸಜ್ಜನ್ ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಎಸ್.ಎ. ನಯಿಂ ಮಾತನಾಡಿ, ಧರ್ಮ ಯಾವುದೇ ಆಗಿರಲಿ, ಮಾನವೀಯತೆಯೇ ಮುಖ್ಯ. ಮತ್ತೊಬ್ಬರ ಕಷ್ಟಗಳಿಗೆ ಸ್ಪಂದಿಸುವುದು, ಪರಸ್ಪರ ಸಹಕಾರದಿಂದ ಬದುಕುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ಪ್ರವಾದಿಯವರು ತೋರಿದ ಸನ್ಮಾರ್ಗದಲ್ಲಿ ನಡೆದು ಸಮಾಜದಲ್ಲಿ ಶಾಂತಿ ಮತ್ತು ಸಹಬಾಳ್ವೆ ಬೆಳೆಸಬೇಕು ಎಂದರು.ಮುದಗಲ್‌ನಲ್ಲಿ ಎಲ್ಲ ಸಮುದಾಯದವರು ಹಬ್ಬ-ಹರಿದಿನಗಳನ್ನು ಸೌಹಾರ್ದತೆಯಿಂದ ಆಚರಿಸುತ್ತಿರುವುದು ಭಾವೈಕ್ಯತೆಗೆ ಹಿಡಿದ ಕೈಗನ್ನಡಿಯಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ದೇವಿಂದ್ರ ವಕೀಲ್, ಎಸ್ಸೆನ್ ಖಾದ್ರಿ, ಮಂಜುನಾಥ ಬನ್ನಿಗೋಳ್ಕರ್, ಮೈಬೂಬು ಕಡ್ಡಿಪುಡಿ, ಹುಸೇನ್ ಪಾಶಾ, ಮಾಬು ಹುಸೇನ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

*ಸತ್ಯದೊಂದಿಗೆ ಸದಾ ನಿಮಗಾಗಿ*
*ಇದು ನಿಮ್ಮ ವಿಕಾಸ ನ್ಯೂಸ್ Digital Media* ನಿಮ್ಮ ಪ್ರೋತ್ಸಾಹ ಸದಾ ಇರಲಿ, ಸುದ್ದಿ & ಜಾಹಿರಾತಿಗಾಗಿ ಸಂಪರ್ಕಿಸಿ : *9663272999 – 9449266958

ನಿಮ್ಮ ಪ್ರತಿಕ್ರಿಯೆ ಏನು?

ಇಷ್ಟ ಇಷ್ಟ 0
ಇಷ್ಟವಿಲ್ಲ ಇಷ್ಟವಿಲ್ಲ 0
ಪ್ರೀತಿ ಪ್ರೀತಿ 0
ತಮಾಷೆ ತಮಾಷೆ 0
ವಾಹ್ ವಾಹ್ 0
ದುಃಖ ದುಃಖ 0
ಕೋಪಗೊಂಡ ಕೋಪಗೊಂಡ 0

ಕಾಮೆಂಟ್‌ಗಳು (0)

User