ಸಿಎಂ ಆದ ಬಳಿಕ ಮೊದಲ ಬಾರಿಗೆ ಮೈಸೂರಿಗೆ ಡಿಕೆಶಿ ಆಗಮನ – ಅದ್ದೂರಿ ಸ್ವಾಗತಕ್ಕೆ ಸಿದ್ಧತೆ!

ಆಗಸ್ಟ್ 02, 2026 - 15:40
0 0

ಮೈಸೂರು: ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ಡಿ.ಕೆ. ಶಿವಕುಮಾರ್ ಮೈಸೂರಿಗೆ ಭೇಟಿ ನೀಡುತ್ತಿದ್ದಾರೆ. ಸಿಎಂ ಡಿಕೆಶಿ ಅದ್ಧೂರಿ ಸ್ವಾಗತಕ್ಕೆ ಮೈಸೂರು ಸಜ್ಜಾಗಿದೆ. ಸಿಎಂ ತವರು ಜಿಲ್ಲೆಯಾದ ಮೈಸೂರಿನಲ್ಲಿ ಡಿ.ಕೆ. ಶಿವಕುಮಾರ್ ಪ್ರವಾಸ ಕೈಗೊಂಡಿದ್ದು, ಡಿಕೆಶಿ ಶಕ್ತಿ ಪ್ರದರ್ಶನಕ್ಕೆ ವೇದಿಕೆ ಸಿದ್ಧವಾಗಿದೆ.

ಮುಖ್ಯಮಂತ್ರಿಗಳ ಆಗಮನದ ಹಿನ್ನೆಲೆಯಲ್ಲಿ ಮೈಸೂರು ನಗರದಾದ್ಯಂತ ಡಿ.ಕೆ. ಶಿವಕುಮಾರ್ ಅವರ ಕಟೌಟ್‌ ಹಾಗೂ ಫ್ಲೆಕ್ಸ್​​ಗಳ ಭರಾಟೆ ಜೋರಾಗಿದೆ. ಕಾರಂಜಿ ಕೆರೆ ವೃತ್ತದಿಂದ ಕುರುಬರಹಳ್ಳಿ ವೃತ್ತದವರೆಗೆ ರಸ್ತೆಯ ಇಕ್ಕೆಲಗಳಲ್ಲಿ ಬೃಹತ್ ಗಾತ್ರದ ಬ್ಯಾನರ್‌ಗಳು ಮತ್ತು ಸ್ವಾಗತ ಕೋರುವ ಫ್ಲೆಕ್ಸ್​​ಗಳನ್ನು ಅಳವಡಿಸಲಾಗಿದೆ. ಅಭಿಮಾನಿಗಳು ಮತ್ತು ಪಕ್ಷದ ಕಾರ್ಯಕರ್ತರು ಸಿಎಂ ಅವರನ್ನು ಅದ್ದೂರಿಯಾಗಿ ಸ್ವಾಗತಿಸಲು ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದ್ದಾರೆ.

ಮೈಸೂರು ಪ್ರವಾಸದ ಪ್ರಮುಖ ಭಾಗವಾಗಿ ಸಿಎಂ ಡಿ.ಕೆ. ಶಿವಕುಮಾರ್ ಅವರು ನಾಡದೇವತೆ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ದೇಗುಲದ ಪ್ರವೇಶದಿಂದ ಹಿಡಿದು ದರ್ಶನದ ವರೆಗೆ ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಮುಖ್ಯಮಂತ್ರಿಯವರ ಭೇಟಿ ಹಿನ್ನೆಲೆ ಚಾಮುಂಡಿ ಬೆಟ್ಟದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.

The post ಸಿಎಂ ಆದ ಬಳಿಕ ಮೊದಲ ಬಾರಿಗೆ ಮೈಸೂರಿಗೆ ಡಿಕೆಶಿ ಆಗಮನ – ಅದ್ದೂರಿ ಸ್ವಾಗತಕ್ಕೆ ಸಿದ್ಧತೆ! first appeared on Freedom TV.

ನಿಮ್ಮ ಪ್ರತಿಕ್ರಿಯೆ ಏನು?

ಇಷ್ಟ ಇಷ್ಟ 0
ಇಷ್ಟವಿಲ್ಲ ಇಷ್ಟವಿಲ್ಲ 0
ಪ್ರೀತಿ ಪ್ರೀತಿ 0
ತಮಾಷೆ ತಮಾಷೆ 0
ವಾಹ್ ವಾಹ್ 0
ದುಃಖ ದುಃಖ 0
ಕೋಪಗೊಂಡ ಕೋಪಗೊಂಡ 0

ಕಾಮೆಂಟ್‌ಗಳು (0)

User