100 ಅಡಿ ಪ್ರಪಾತಕ್ಕೆ ಉರುಳಿದ ಬಸ್‌ – 7 ಮಂದಿ ಸಾವು!

ಆಗಸ್ಟ್ 11, 2026 - 02:57
0 0

ಶಿಮ್ಲಾ : ಖಾಸಗಿ ಬಸ್ಸೊಂದು 100 ಅಡಿ ಆಳದ ಪ್ರಪಾತಕ್ಕೆ ಉರುಳಿಬಿದ್ದ ಪರಿಣಾಮ, ಚಾಲಕ ಮತ್ತು ಕಂಡಕ್ಟರ್ ಸೇರಿ 7 ಮಂದಿ ಸಾವನ್ನಪ್ಪಿರುವ ಘಟನೆ ಹಿಮಾಚಲ ಪ್ರದೇಶದ ಚಂಬಾ ಜಿಲ್ಲೆಯಲ್ಲಿ ನಡೆದಿದೆ. ಈ ದುರ್ಘಟನೆಯಲ್ಲಿ 10 ಜನ ಗಾಯಗೊಂಡಿದ್ದು, ಅವರ ಪೈಕಿ 6 ಜನರ ಸ್ಥಿತಿ ಗಂಭೀರವಾಗಿದೆ.

ಇಂದು ಬೆಳಿಗ್ಗೆ ಬೈರಾಗರ್‌ನಿಂದ ಚಂಬಾ ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್, ಬೈರಾಗರ್-ಟಿಸ್ಸಾ ಮಾರ್ಗದ ದೇವಿಕೋಥಿ ಪ್ರದೇಶದ ಚಲುಂಜ್ ಮೋರ್ ಬಳಿ ಈ ದುರ್ಘಟನೆ ಸಂಭವಿಸಿದೆ. ಅಪಘಾತ ಸಂಭವಿಸಿದ ವೇಳೆ ಬಸ್‌ನಲ್ಲಿ ಒಟ್ಟು 18 ಜನ ಪ್ರಯಾಣಿಸುತ್ತಿದ್ದರು. ನಿಯಂತ್ರಣ ತಪ್ಪಿ ಪಲ್ಟಿಯಾದ ಬಸ್, ಕೆಳಗಿನ ರಸ್ತೆಗೆ ಉರುಳಿದೆ. ಈ ವೇಳೆ ಕೆಲ ಪ್ರಯಾಣಿಕರು ಬಸ್‌ನ ಅಡಿಗೆ ಸಿಲುಕಿ ಮೃತಪಟ್ಟಿದ್ದಾರೆ.

ಘಟನಾ ಸ್ಥಳಕ್ಕೆ ಎನ್‌ಡಿಆರ್‌ಎಫ್, ಪೊಲೀಸ್ ಹಾಗೂ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ, ಬಸ್‌ನ್ನು ಮೇಲೆತ್ತಿ, ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ.

The post 100 ಅಡಿ ಪ್ರಪಾತಕ್ಕೆ ಉರುಳಿದ ಬಸ್‌ – 7 ಮಂದಿ ಸಾವು! first appeared on Freedom TV.

ನಿಮ್ಮ ಪ್ರತಿಕ್ರಿಯೆ ಏನು?

ಇಷ್ಟ ಇಷ್ಟ 0
ಇಷ್ಟವಿಲ್ಲ ಇಷ್ಟವಿಲ್ಲ 0
ಪ್ರೀತಿ ಪ್ರೀತಿ 0
ತಮಾಷೆ ತಮಾಷೆ 0
ವಾಹ್ ವಾಹ್ 0
ದುಃಖ ದುಃಖ 0
ಕೋಪಗೊಂಡ ಕೋಪಗೊಂಡ 0

ಕಾಮೆಂಟ್‌ಗಳು (0)

User