ಕರ್ನಾಟಕಕ್ಕೆ ಮತ್ತೆ ಶಾಕ್ – ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA!

ಆಗಸ್ಟ್ 26, 2026 - 11:17
0 0

ಬೆಂಗಳೂರು: ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕಕ್ಕೆ ಮತ್ತೊಮ್ಮೆ ಹಿನ್ನಡೆಯಾಗಿದೆ. ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ನೀಡಿದ್ದ ಸೂಚನೆಯಂತೆ, ತಮಿಳುನಾಡಿಗೆ ಪ್ರತಿದಿನ 9 ಸಾವಿರ ಕ್ಯೂಸೆಕ್ ನೀರನ್ನು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ (CWMA) ಸಭೆಯಲ್ಲಿ ಆದೇಶ ನೀಡಲಾಗಿದೆ.

ನವದೆಹಲಿಯಲ್ಲಿ ಇಂದು ನಡೆದ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಈ ಹಿಂದೆ ನೀಡಿದ್ದ ಶಿಫಾರಸಿನಂತೆ, ಕರ್ನಾಟಕವು ತಮಿಳುನಾಡಿಗೆ ನಿತ್ಯ 9 ಸಾವಿರ ಕ್ಯೂಸೆಕ್ ನೀರನ್ನು ಬಿಡುಗಡೆ ಮಾಡಬೇಕು ಎಂದು ಪ್ರಾಧಿಕಾರ ಸ್ಪಷ್ಟಪಡಿಸಿದೆ.

ರಾಜ್ಯದ ಜಲಾಶಯಗಳಲ್ಲಿ ಲಭ್ಯವಿರುವ ನೀರಿನ ಪ್ರಮಾಣ ಮತ್ತು ಮಳೆಯ ಕೊರತೆಯ ಬಗ್ಗೆ ಕರ್ನಾಟಕದ ಅಧಿಕಾರಿಗಳು ಸಭೆಯಲ್ಲಿ ವಿವರಣೆ ನೀಡಿದರೂ, ಪ್ರಾಧಿಕಾರವು ತಮಿಳುನಾಡಿನ ಬೇಡಿಕೆಯಂತೆ ನೀರು ಹರಿಸಲು ಸೂಚಿಸಿದೆ.

The post ಕರ್ನಾಟಕಕ್ಕೆ ಮತ್ತೆ ಶಾಕ್ – ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA! first appeared on Freedom TV.

ನಿಮ್ಮ ಪ್ರತಿಕ್ರಿಯೆ ಏನು?

ಇಷ್ಟ ಇಷ್ಟ 0
ಇಷ್ಟವಿಲ್ಲ ಇಷ್ಟವಿಲ್ಲ 0
ಪ್ರೀತಿ ಪ್ರೀತಿ 0
ತಮಾಷೆ ತಮಾಷೆ 0
ವಾಹ್ ವಾಹ್ 0
ದುಃಖ ದುಃಖ 0
ಕೋಪಗೊಂಡ ಕೋಪಗೊಂಡ 0

ಕಾಮೆಂಟ್‌ಗಳು (0)

User