ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ದಾಳಿ – ಪ್ರಜ್ವಲ್ ರೇವಣ್ಣ ಬ್ಯಾರಕ್​​ನಲ್ಲಿ ಮೊಬೈಲ್ ಪತ್ತೆ!

ಆಗಸ್ಟ್ 14, 2026 - 04:59
0 0

ಬೆಂಗಳೂರು : ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಸಿಸಿಬಿ ಪೊಲೀಸರು ದಿಢೀರ್ ದಾಳಿ ನಡೆಸಿದ್ದು, ಈ ವೇಳೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಇರುವ ಬ್ಯಾರಕ್‌ನಲ್ಲಿ ಮೊಬೈಲ್ ಫೋನ್ ಪತ್ತೆಯಾಗಿದೆ.

ಮಂಗಳವಾರ ಮಧ್ಯಾಹ್ನ ಸಿಸಿಬಿ ದಾಳಿ ನಡೆಸಿದೆ. ಈ ವೇಳೆ ಪ್ರಜ್ವಲ್ ರೇವಣ್ಣ ಅವರಿರುವ ಬ್ಯಾರಕ್ ನಿಂದ ಒಂದು ಆಂಡ್ರಾಯ್ಡ್ ಫೋನ್ ಅನ್ನು ವಶಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಸಿಸಿಬಿ ಅಧಿಕಾರಿಗಳು ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆಯಾದ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಡಿಜಿಪಿ ಅಲೋಕ್ ಕುಮಾರ್, ಕರ್ತವ್ಯಲೋಪ ಎಸಗಿದ ಜೈಲಿನ ಸಹಾಯಕ ಸೂಪರಿಂಟೆಂಡೆಂಟ್ ಅವರನ್ನು ಅಮಾನತುಗೊಳಿಸಿ ಆದೇಶಿಸಿದ್ದಾರೆ. ಅಲ್ಲದೆ, ಜೈಲು ಎಸ್‌ಪಿಗೆ ಶೋಕಾಸ್ ನೋಟಿಸ್ ಜಾರಿ ಮಾಡಲಾಗಿದೆ.

The post ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ದಾಳಿ – ಪ್ರಜ್ವಲ್ ರೇವಣ್ಣ ಬ್ಯಾರಕ್​​ನಲ್ಲಿ ಮೊಬೈಲ್ ಪತ್ತೆ! first appeared on Freedom TV.

ನಿಮ್ಮ ಪ್ರತಿಕ್ರಿಯೆ ಏನು?

ಇಷ್ಟ ಇಷ್ಟ 0
ಇಷ್ಟವಿಲ್ಲ ಇಷ್ಟವಿಲ್ಲ 0
ಪ್ರೀತಿ ಪ್ರೀತಿ 0
ತಮಾಷೆ ತಮಾಷೆ 0
ವಾಹ್ ವಾಹ್ 0
ದುಃಖ ದುಃಖ 0
ಕೋಪಗೊಂಡ ಕೋಪಗೊಂಡ 0

ಕಾಮೆಂಟ್‌ಗಳು (0)

User