ಪಾಕಿಸ್ತಾನದ ಕಲ್ಲಿದ್ದಲು ಗಣಿಯಲ್ಲಿ ಭೀಕರ ಸ್ಫೋಟ – 32 ಕಾರ್ಮಿಕರು ಸಾವು!
ಇಸ್ಲಾಮಾಬಾದ್: ಪಾಕಿಸ್ತಾನದ ನೈರುತ್ಯ ಬಲೂಚಿಸ್ತಾನ್ ಪ್ರಾಂತ್ಯದ ಕಲ್ಲಿದ್ದಲು ಗಣಿಯೊಂದರಲ್ಲಿ ಭೀಕರ ಸ್ಫೋಟ ಸಂಭವಿಸಿದ್ದು, ಸ್ಪೋಟದ ತೀವ್ರತೆಗೆ 32 ಕಾರ್ಮಿಕರು ಸಾವನ್ನಪ್ಪಿದ್ದಾರೆ.
ಕ್ವೆಟ್ಟಾ ಬಳಿಯ ಸೂರಾಂಗ್ ಪ್ರದೇಶದಲ್ಲಿರುವ ಕಲ್ಲಿದ್ದಲು ಗಣಿಯಲ್ಲಿ ಗುರುವಾರದಂದು ಈ ಭೀಕರ ದುರಂತ ಸಂಭವಿಸಿದೆ. ದುರಂತ ನಡೆದು 12 ಗಂಟೆಗಳಿಗೂ ಹೆಚ್ಚು ಕಾಲ ಕಳೆದಿದ್ದರೂ, ಗಣಿಯೊಳಗೆ ಸಿಲುಕಿರುವವರ ರಕ್ಷಣಾ ಕಾರ್ಯಾಚರಣೆ ಇನ್ನೂ ಭರದಿಂದ ಸಾಗುತ್ತಿದೆ.
ಗಣಿಯೊಳಗೆ ಮೀಥೇನ್ ಅನಿಲ ಸ್ಫೋಟಗೊಂಡ ಕಾರಣ ಆಮ್ಲಜನಕದ ಮಟ್ಟ ಶೂನ್ಯಕ್ಕೆ ಕುಸಿದಿದೆ. ಹೀಗಾಗಿ ಕಾರ್ಮಿಕರು ಬದುಕುಳಿದಿರುವುದು ತೀರಾ ಕಡಿಮೆ ಎಂದು ಸರ್ಕಾರಿ ಗಣಿ ಇಲಾಖೆಯ ಇನ್ಸ್ಪೆಕ್ಟರ್ ಘನಿ ಬಲೋಚ್ ತಿಳಿಸಿದ್ದಾರೆ.
ತುರ್ತು ಕಾರ್ಯಾಚರಣೆ ಪಡೆ ಸಿಬ್ಬಂದಿ ಮತ್ತು ರಕ್ಷಣಾ ಸಿಬ್ಬಂದಿ ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದು, ಗಣಿಯೊಳಗೆ ಇನ್ನೂ ಸಿಲುಕಿಕೊಂಡಿರಬಹುದಾದ ಇತರ ಕಾರ್ಮಿಕರಿಗಾಗಿ ತೀವ್ರ ಹುಡುಕಾಟ ನಡೆಸುತ್ತಿದ್ದಾರೆ. ಗಣಿಯ ವಿಷಾನಿಲದ ಪ್ರಭಾವದಿಂದಾಗಿ ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಯಾಗುತ್ತಿದ್ದು, ಆದಷ್ಟು ಬೇಗ ಎಲ್ಲರನ್ನೂ ಹೊರತೆಗೆಯಲು ಹರಸಾಹಸ ಪಡಲಾಗುತ್ತಿದೆ.
The post ಪಾಕಿಸ್ತಾನದ ಕಲ್ಲಿದ್ದಲು ಗಣಿಯಲ್ಲಿ ಭೀಕರ ಸ್ಫೋಟ – 32 ಕಾರ್ಮಿಕರು ಸಾವು! first appeared on Freedom TV.
ನಿಮ್ಮ ಪ್ರತಿಕ್ರಿಯೆ ಏನು?
ಇಷ್ಟ
0
ಇಷ್ಟವಿಲ್ಲ
0
ಪ್ರೀತಿ
0
ತಮಾಷೆ
0
ವಾಹ್
0
ದುಃಖ
0
ಕೋಪಗೊಂಡ
0
ಕಾಮೆಂಟ್‌ಗಳು (0)