ಮಹಾರಾಷ್ಟ್ರದಲ್ಲಿ 4 ಅಂತಸ್ತಿನ ಕಟ್ಟಡ ಕುಸಿತ – 9 ಮಂದಿ ಸಾವು!
ಮುಂಬೈ: ಭಾರಿ ಮಳೆಯಿಂದಾಗಿ ಮಹಾರಾಷ್ಟ್ರದ ಭಿವಂಡಿಯಲ್ಲಿ 4 ಮಹಡಿಯ ಕಟ್ಟಡದ ಒಂದು ಭಾಗ ದಿಢೀರ್ ಕುಸಿದು ಬಿದ್ದು, 9 ಮಂದಿ ಸಾವನ್ನಪ್ಪಿದ್ದಾರೆ.
ಬಾಲಾಜಿ ನಗರ ಪ್ರದೇಶದ ಕೊಹಿನೂರ್ ಕಟ್ಟಡದಲ್ಲಿ ಈ ಘಟನೆ ನಡೆದಿದ್ದು, ಅಗ್ನಿಶಾಮಕ ದಳ, ಸ್ಥಳೀಯ ಪೊಲೀಸರು ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ರಕ್ಷಣಾ ಕಾರ್ಯಾಚರಣೆ ನಡೆಸಿತು.
ಶ್ವಾನ ದಳ, ನಾಲ್ಕು ಅಗ್ನಿಶಾಮಕ ವಾಹನಗಳು, ಎರಡು ಆಂಬ್ಯುಲೆನ್ಸ್‌ಗಳು ಮತ್ತು ಮಣ್ಣು ತೆಗೆಯುವ ಯಂತ್ರಗಳನ್ನು ಸ್ಥಳದಲ್ಲಿ ಕಾರ್ಯಾಚರಣೆ ನಡೆದಿದೆ. ಗಾಯಗೊಂಡವರನ್ನ ಸಮೀಪದ ಆಸ್ಪತ್ರೆಗೆ ಚಿಕಿತ್ಸೆಗಾಗಿ ಸ್ಥಳಾಂತರಿಸಲಾಗಿದೆ.
The post ಮಹಾರಾಷ್ಟ್ರದಲ್ಲಿ 4 ಅಂತಸ್ತಿನ ಕಟ್ಟಡ ಕುಸಿತ – 9 ಮಂದಿ ಸಾವು! first appeared on Freedom TV.
ನಿಮ್ಮ ಪ್ರತಿಕ್ರಿಯೆ ಏನು?
ಇಷ್ಟ
0
ಇಷ್ಟವಿಲ್ಲ
0
ಪ್ರೀತಿ
0
ತಮಾಷೆ
0
ವಾಹ್
0
ದುಃಖ
0
ಕೋಪಗೊಂಡ
0
ಕಾಮೆಂಟ್‌ಗಳು (0)