ರಾಂಚಿಯಲ್ಲಿ ತೀವ್ರಗೊಂಡ JPSC-JSSC ವಿದ್ಯಾರ್ಥಿಗಳ ಪ್ರೊಟೆಸ್ಟ್ – ಪೊಲೀಸರಿಂದ ಲಾಠಿಚಾರ್ಜ್!
ಜಾರ್ಖಂಡ್ : ಜಾರ್ಖಂಡ್ನಲ್ಲಿ JPSC ಮತ್ತು JSSC ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಪರೀಕ್ಷಾ ಸುಧಾರಣೆಗಳಿಗೆ ಆಗ್ರಹಿಸಿ ಸಾವಿರಾರು ವಿದ್ಯಾರ್ಥಿಗಳು ಜಾರ್ಖಂಡ್ ವಿಧಾನಸಭೆಯತ್ತ ಬೃಹತ್ ಮೆರವಣಿಗೆ ನಡೆಸಿ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.
ಪ್ರತಿಭಟನಾಕಾರರು ಪೊಲೀಸ್ ಬ್ಯಾರಿಕೇಡ್ಗಳನ್ನು ಮುರಿದು ವಿಧಾನಸೌಧದ ಕಡೆಗೆ ಮುನ್ನುಗ್ಗಲು ಯತ್ನಿಸಿದರು. ಪ್ರತಿಭಟನಾಕಾರರನ್ನು ಚದುರಿಸಲು ಭದ್ರತಾ ಸಿಬ್ಬಂದಿ ಲಾಠಿಚಾರ್ಜ್ ಹಾಗೂ ಜಲಫಿರಂಗಿ ಬಳಸಿದ್ದಾರೆ. ಘಟನಾ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ನಗರಾದ್ಯಂತ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ.
ಬ್ಯಾರಿಕೇಡ್ಗಳನ್ನು ಮುರಿದು ಮುನ್ನುಗ್ಗಲು ಯತ್ನಿಸಿದಾಗ ಪೊಲೀಸರು ಲಾಠಿಚಾರ್ಜ್ ನಡೆಸಿದರು. ಇದಕ್ಕೆ ಪ್ರತಿಯಾಗಿ ಆಕ್ರೋಶಗೊಂಡ ಪ್ರತಿಭಟನಾಕಾರರು ಪೊಲೀಸರತ್ತ ಚಪ್ಪಲಿ ಹಾಗೂ ಖಾಲಿ ನೀರಿನ ಬಾಟಲಿಗಳನ್ನು ತೂರಿದರು.
The post ರಾಂಚಿಯಲ್ಲಿ ತೀವ್ರಗೊಂಡ JPSC-JSSC ವಿದ್ಯಾರ್ಥಿಗಳ ಪ್ರೊಟೆಸ್ಟ್ – ಪೊಲೀಸರಿಂದ ಲಾಠಿಚಾರ್ಜ್! first appeared on Freedom TV.
ನಿಮ್ಮ ಪ್ರತಿಕ್ರಿಯೆ ಏನು?
ಇಷ್ಟ
0
ಇಷ್ಟವಿಲ್ಲ
0
ಪ್ರೀತಿ
0
ತಮಾಷೆ
0
ವಾಹ್
0
ದುಃಖ
0
ಕೋಪಗೊಂಡ
0
ಕಾಮೆಂಟ್ಗಳು (0)